ತಲೆಮರೆಸಿದ್ದ ಆರೋಪಿಯ ಸೆರೆ
Thursday, June 25, 2026
ಬಂಟ್ವಾಳ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಕಾಟಿಪಳ್ಳ ಸುರತ್ಕಲ್ ನಿವಾಸಿ ಮೊಹಮ್ಮದ್ ಆಯುಬ್ ಎಂಬವರ ಪುತ್ರ ಮೊಹಮ್ಮದ್ ಫರಾಜ್ ಬಂಧಿತನಾಗಿದ್ದಾನೆ.
2023ರಲ್ಲಿ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮಾರಿಸಿಕೊಂಡಿದ್ದು,ನ್ಯಾಯಾಲಯ ಈತನ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿತ್ತು.
ಆರೋಪಿಯು ಮಂಗಳೂರಿನಲ್ಲಿ ರುವುದನ್ನು ಪತ್ತೆಹಚ್ಚಿದ ಬಂಟ್ವಾಳ ನಗರ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ಮೇಲೆ ಪಣಂಬೂರು, ಬಜ್ಪೆ ಮತ್ತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.