ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಮೃತ್ಯು

ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಮೃತ್ಯು


ಬೆಳ್ತಂಗಡಿ: ಬೆಳಾಲು ಗ್ರಾಮದ ಮಿನಂದೇಲು ಬಳಿ ಸ್ಕೂಟಿಯೊಂದು ಜೂ.12ರಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆಯಲ್ಲಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಬೆಳಾಲು ನಿವಾಸಿ ನಿವೃತ್ತ ಮಾಜಿ ಸೈನಿಕ ಮೋಹನ್ ಗೌಡ ಕಾಂಡಂಡ ಅವರ ಪುತ್ರ ಉಜಿರೆಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯೊಂದರ ವಿದ್ಯಾರ್ಥಿ ದಿಯಾನ್ (7) ಮೃತಪಟ್ಟ ಬಾಲಕ.

ಮೋಹನ್ ಗೌಡ ಅವರು ದಿಯಾನ್ ನನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಬೆಂಕಿ ಹತ್ತಿಕೊಂಡು ಬಾಲಕನಿಗೆ ತೀವ್ರತರದ ಸುಟ್ಟ ಗಾಯಗಳು ಉಂಟಾಗಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತ ಬಾಲಕ ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾನೆ.

ಮೋಹನ್ ಗೌಡ ಕಾಡಂಡ ಅವರು ಭಾರತೀಯ ಭೂಸೇನೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿ ಏ.12 ರಂದು ಹುಟ್ಟೂರಿಗೆ ಆಗಮಿಸಿದ್ದರು. ಮೋಹನ್ ಗೌಡ ಕಾಡಂಡ ಅವರಿಗೂ ಗಾಯಗಳಾಗಿದ್ದು, ಅವರು ಚೇತರಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article