ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಅಮಾನತು

ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಅಮಾನತು

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರೊಬ್ಬರಿಗೆ ಲಂಚಕ್ಕೆ ಕಿರುಕುಳ ನೀಡುವ ಬಗ್ಗೆ ದೂರು ದಾಖಲಾಗಿದ್ದು, ಆಸ್ಪತ್ರೆಯ ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕ್ಲರ್ಕ್‌ನ ನಿವೇಶನ ಹುದ್ದೆಯಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಚಂದ್ರಶೇಖರ್ ಅವರು ಲಂಚಕ್ಕೆ ಕಿರುಕುಳ ನೀಡುತ್ತಿರುವ ಬಗ್ಗೆ ದೂರು ನೀಡಿದ್ದು, ಈ ಬಗ್ಗೆ ಆಂತರಿಕ ದೂರು ಸಮಿತಿ ಸಭೆ ನಡೆದು ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಕೋರಿದ್ದು, ಈ ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಸೂಕ್ತ ದಾಖಲೆಗಳು ಹಾಗೂ ಆಂತರಿಕ ದೂರು ಸಮಿತಿ ಸಭೆಯ ಅಭಿಪ್ರಾಯ ಮತ್ತು ಶಿಫಾರಸ್ಸುಗಳನ್ನು ಇಲ್ಲಿಗೆ ಇದುವರೆಗೂ ಸಮಿತಿಯಿಂದ ದಾಖಲೆಗಳನ್ನು ಪಡೆದು ಹಾಗೂ ಎಫ್‌ಐಆರ್ ಸೇರಿ ಸಂಬಂಧಿತ ಸಾಕ್ಷ್ಯಾಧಾರ ಲಿಖಿತ ಹೇಳಿಕೆಗಳನ್ನು ಹಾಗೂ ದೂರುದಾರರ ತನಿಖೆಗೆ ಹಾಜರಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿ ಚಂದ್ರಶೇಖರ್ ವಿರುದ್ಧ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) 1957 ನಿಯಮ 10(1)(ಬಿ)ರ ಮೇರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ. ರಜನಿ ಎಂ. ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article