ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ: ನ್ಯಾಯಾಂಗ ಬಂಧನ

ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ: ನ್ಯಾಯಾಂಗ ಬಂಧನ


ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘಟನೆಯ ವಿವರ: 

ಧರ್ಮಸ್ಥಳ ಠಾಣಾ ವ್ಯಾಪ್ತಿಯ ನಿವಾಸಿ ಸಂತ್ರಸ್ಥ ಮಹಿಳೆ 2023ರಲ್ಲಿ ರಾತ್ರಿ ವೇಳೆ, ತನ್ನ ಮನೆಯಲ್ಲಿ ಒಬ್ಬಳೇ ಇರುವಾಗ, ಅವರ ಸಂಬಂಧಿ ಆರೋಪಿ ಸುರೇಶ್ ಎಂಬಾತನು, ಮನೆಗೆ ಬಂದು ಸಂತ್ರಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿರುವುದಾಗಿ ಜೂ.6 ರಂದು ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:41/2026, ಕಲಂ: 376, 506 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣದ ತನಿಖೆಯನ್ನು ನಡೆಸಿದ ಪೊಲೀಸರು ಆರೋಪಿಯನ್ನು ಜೂ.9 ರಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ, ಆದೇಶ ಹೊರಡಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article