ಕಟ್ಟಡದಿಂದ ಬಿದ್ದು ಸಾವು

ಕಟ್ಟಡದಿಂದ ಬಿದ್ದು ಸಾವು

ಕಾಸರಗೋಡು: ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ನಡೆದಿದೆ. 

ಬೇಳ ಕೊಳಂಬೆ ಯ ಫ್ರಾನ್ಸಿಸ್ ಡಿ’ಸೋಜ (47) ಮೃತಪಟ್ಟವರು.

ನಾಯ್ಕಾಪು ಮುಂಜಾಂಗಾವು ಎಂಬಲ್ಲಿ ಮನೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಫ್ರಾನ್ಸಿಸ್ ರವರನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article