ಯೋಗ ನಮ್ಮ ದೈನಂದಿನ ಚಟುವಟಿಕೆಗಳ ಭಾಗವಾಗಬೇಕು: ಮೇಘಾ ಶೆಟ್ಟಿ
Sunday, June 21, 2026
ಕಟೀಲು: ಯೋಗ ನಮ್ಮ ದೈನಂದಿನ ಚಟುವಟಿಕೆಗಳ ಭಾಗವಾಗಬೇಕು. ಆ ಮೂಲಕ ನಮ್ಮ ದೈಹಿಕ ಮಾನಸಿಕ ಆರೋಗ್ಯ ಉತ್ತಮ ಪಡಿಸೋಣ ಎಂದು ಅಂತಾರಾಷ್ಟ್ರೀಯ ಮಟ್ಟದ ಯೋಗ ಪಟು, ಕಟೀಲು ವಿದ್ಯಾ ಸಂಸ್ಥೆಯ ಹಳೆ ವಿದ್ಯಾರ್ಥಿನಿ ಮೇಘಾ ಶೆಟ್ಟಿ ಹೇಳಿದರು.
ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು.
ಕಟೀಲು ದೇಗುಲದ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಉದ್ಘಾಟಿಸಿದರು. ಯೋಗ ಶಿಕ್ಷಕ ದುರ್ಗಾಪ್ರಸಾದ್, ಕಟೀಲು, ಕಟೀಲು ಶಿಕ್ಷಣ ಸಂಸ್ಥೆಗಳ ಮೇಲುಸ್ತುವಾರಿ ದಯಾನಂದ ಮಾಡ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ವಿಜಯ್ ವಿ. ಕುಸುಮಾವತಿ, ರಾಜಶೇಖರ ಎನ್. ಗಿರೀಶ್ ತಂತ್ರಿ, ಚಂದ್ರಶೇಖರ ಭಟ್, ಸರೋಜಿನಿ ಮತ್ತಿತರರಿದ್ದರು.
ಉಪನ್ಯಾಸಕಿ ತನುಜಾ ನಿರೂಪಿಸಿದರು. ಕಟೀಲು ದೇಗುಲದ ಆರು ಶಿಕ್ಷಣ ಸಂಸ್ಥೆಗಳ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ ಪ್ರದರ್ಶನವಾಯಿತು.

