ಚಾಂತಾರು ರೈಲು ಬಡಿದು ಅಪರಿಚಿತನ ದುರ್ಮರಣ

ಚಾಂತಾರು ರೈಲು ಬಡಿದು ಅಪರಿಚಿತನ ದುರ್ಮರಣ

ಕುಂದಾಪುರ: ಬ್ರಹ್ಮಾವರ ತಾಲೂಕು  ಚಾಂತಾರು ಗ್ರಾಮದ ಕುಂಜಾಲು ರಸ್ತೆಯ ಸಮೀಪದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ರೈಲು ಅಪಘಾತದಲ್ಲಿ ಸುಮಾರು 65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಬೆಳಗ್ಗೆ ಸುಮಾರು 7 ಗಂಟೆಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಚಾಂತಾರು ಸಮೀಪ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಯಾವುದೇ ನಿಲುಗಡೆಯ ಸ್ಟೇಷನ್ ಹತ್ತಿರವಿರದಿದ್ದ ಕಾರಣ ರೈಲು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಈ ಕಾರಣದಿಂದ ಅಪಘಾತವನ್ನು ತಪ್ಪಿಸಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಡಿಕ್ಕಿಯ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ಉಡುಪಿ ರೈಲ್ವೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂಜಯ್ ವತ್ಸ್ ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. 

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ಸಂಬಂಧಿಕರು ಅಥವಾ ಸಾರ್ವಜನಿಕರು ಯಾವುದೇ ಮಾಹಿತಿ ಹೊಂದಿದ್ದಲ್ಲಿ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ತನಿಖೆ ಮುಂದುವರಿದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article