ಗಂಗೊಳ್ಳಿ ಗ್ರಾ.ಪಂ.: ಮಹಿಳಾ ಗ್ರಾಮಸಭೆ

ಗಂಗೊಳ್ಳಿ ಗ್ರಾ.ಪಂ.: ಮಹಿಳಾ ಗ್ರಾಮಸಭೆ

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ 2026-27ನೇ ಸಾಲಿನ ಮಹಿಳಾ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ  ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರೇಖಾ ಅವರು ಗೃಹಲಕ್ಷ್ಮೀ ಯೋಜನೆ, ಉದ್ಯೋಗಿನಿ ಯೋಜನೆ, ಮಾತೃವಂದನಾ ಯೋಜನೆ, ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕಾಂಶ ಆಹಾರ ಹಾಗೂ ಮಹಿಳೆ ಮತ್ತು ಮಕ್ಕಳ ಆಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. 

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಶುಶ್ರೂಷಕಿ ಪ್ರಜ್ವಲಾ ಅವರು, ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಮತ್ತು ಪಲ್ಸ್ ಪೊಲೀಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. 

ಕುಟುಂಬ ಸಾಂತ್ವನ ಕೇಂದ್ರ ತಲ್ಲೂರು ಇದರ ಆಪ್ತ ಸಮಾಲೋಚಕಿ ಪೂರ್ಣಿಮಾ ಅವರು ಆಪ್ತ ಸಮಾಲೋಚನೆ ನಡೆಸಿ ಕಾನೂನು ನೆರವಿನ ಬಗ್ಗೆ ಮಾಹಿತಿ ನೀಡಿದರು.

ಗ್ರಾ.ಪಂ. ಉಪಾಧ್ಯಕ್ಷ ತಬ್ರೇಜ್, ಪಿಡಿಒ ರವಿ, ಕಾರ್ಯದರ್ಶಿ ಅನೂಪ್ ಶೇಟ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶೋಭಾ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

ಗ್ರಾ.ಪಂ. ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article