ದೇವಾಲಯಗಳ ಭೂಮಿ ಮರುವಶಪಡಿಸಿಕೊಳ್ಳುವ ಕ್ರಮಕ್ಕೆ ಅಶೋಕ್ ಪೂಜಾರಿ ಸ್ವಾಗತ
Saturday, June 20, 2026
ಕುಂದಾಪುರ: ರಾಜ್ಯಾದ್ಯಂತ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವ ಹಿಂದೂ ಧಾರ್ಮಿಕ ದತ್ತಿ (ಮುಜರಾಯಿ) ದೇವಸ್ಥಾನಗಳ ಜಮೀನುಗಳನ್ನು ಮರುವಶಕ್ಕೆ ಪಡೆಯುವ ಪ್ರಕ್ರಿಯೆಗೆ ವೇಗ ನೀಡುವಂತೆ ಮುಜರಾಯಿ ಸಚಿವ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಮಹತ್ವದ ನಿರ್ಧಾರವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಅಶೋಕ್ ಪೂಜಾರಿ ಬೀಜಾಡಿ ಸ್ವಾಗತಿಸಿದ್ದಾರೆ.
ಈಗಾಗಾಲೇ ತಾಲೂಕಿನ ಬಹಳಷ್ಟು ಕಡೆ ಇಂತಹ ಸಮಸ್ಯೆಗಳಿದ್ದು, ಕುಂದಾಪುರ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವೂ ಒತ್ತುವರಿಯಾಗಿದೆ. ಈ ಬಗ್ಗೆ ಅಧಿಕಾರಿಗಳು ತಕ್ಷಣ ಗಮನಹರಿಸಿ ಜಮೀನು ಮರುವಶಕ್ಕೆ ಪಡೆಯಲು ಸೂಕ್ತ ಕಾನೂನು ಕ್ರಮವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.