ಈಜಲು ತೆರಳಿ ಯುವಕ ನಾಪತ್ತೆ: ಮೃತದೇಹ ಪತ್ತೆ

ಈಜಲು ತೆರಳಿ ಯುವಕ ನಾಪತ್ತೆ: ಮೃತದೇಹ ಪತ್ತೆ


ಕುಂದಾಪುರ: ತೆಕ್ಕಟ್ಟೆ ಸಮೀಪದ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.

ಸಾಬ್ರಕಟ್ಟೆ ಗರಿಕೆಮಠ ಮೂಲದ ಸಾಮರಾಜ್ (21) ಮೃತಪಟ್ಟ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ:

ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಸಾಮರಾಜ್, ಜೂನ್ 13ರ ಸಂಜೆ ಸುಮಾರು 4.30ರ ವೇಳೆಗೆ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿದ್ದಾಗ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು.

ಈಶ್ವರ್ ಮಲ್ಪೆ ತಂಡದಿಂದ ಶೋಧ ಕಾರ್ಯ:

ವಿದ್ಯಾರ್ಥಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಅವರ ತಂಡ ಶೋಧ ಕಾರ್ಯಾಚರಣೆ ನಡೆಸಿದ್ದು, ಇಂದು ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದ ತಂಡ, ಆಕ್ಸಿಜನ್ ಸಿಲಿಂಡರ್ ಬಳಸಿ ಹೊಳೆಯ ಆಳಕ್ಕೆ ಇಳಿದು ತೀವ್ರ ಹುಡುಕಾಟ ಮುಂದುವರಿಸಿದ್ದರು. ತಂಡದ ನಿರಂತರ ಕಾರ್ಯಾಚರಣೆಯಿಂದ ಹೊಳೆಯ ಮಧ್ಯಭಾಗದಲ್ಲಿ ಸಾಮರಾಜ್ ಅವರ ಮೃತದೇಹ ಪತ್ತೆಯಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article