ನರೇಂದ್ರ ಮೋದಿಯವರ 12 ವರ್ಷಗಳ ಯಶಸ್ವಿ ಸೇವೆಯ ಅಂಗವಾಗಿ ಕಾವೂರು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಉತ್ತರ ಮಂಡಲ ಬಿಜೆಪಿ ವತಿಯಿಂದ ವಿಶೇಷ ರಂಗಪೂಜೆ

ನರೇಂದ್ರ ಮೋದಿಯವರ 12 ವರ್ಷಗಳ ಯಶಸ್ವಿ ಸೇವೆಯ ಅಂಗವಾಗಿ ಕಾವೂರು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಉತ್ತರ ಮಂಡಲ ಬಿಜೆಪಿ ವತಿಯಿಂದ ವಿಶೇಷ ರಂಗಪೂಜೆ


ಮಂಗಳೂರು: ಭಾರತದ ಯಶಸ್ವಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರದ ವತಿಯಿಂದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ಈ ಶುಭ ಕಾರ್ಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ, ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶವು ಇನ್ನಷ್ಟು ಅಭಿವೃದ್ಧಿ ಕಾಣಲಿ ಎಂದು ಪ್ರಾರ್ಥಿಸಿ, ಅವರ ಮುಂದಿನ ಸೇವಾ ಪಯಣವು ಯಶಸ್ವಿಯಾಗಲೆಂದು ಹಾರೈಸಲಾಯಿತು.


ಈ ಧಾರ್ಮಿಕ ಕಾರ್ಯಕ್ರಮದಲ್ಲಿ, ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿಗಳಾದ ರಂದೀಪ್ ಕಾಂಚನ್, ಸಂದೀಪ್ ಪಚ್ಚನಾಡಿ ಹಾಗೂ ಪಕ್ಷದ ವಿವಿಧ ಪದಾಧಿಕಾರಿಗಳು, ಮಾಜಿ ಕಾರ್ಪರೇಟರ್ ಗಳು, ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತಾದಿಗಳು ಭಾಗವಹಿಸಿದರು.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article