ಜೂ.14 ರಂದು ಸಮ್ಮಾನ ಹಾಗೂ ಯಕ್ಷಗಾನ ಪ್ರದರ್ಶನ
ಮಂಗಳೂರು: ಕಲಾ ಸಂಗಮ ಚಾರಿಟೆಬಲ್ ಟ್ರಸ್ಟ್ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 15ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳಾದೇವಿ ದೇವಸ್ಥಾನದಲ್ಲಿ ಸಮ್ಮಾನ ಹಾಗೂ ಯಕ್ಷಗಾನ ಪ್ರದರ್ಶನ ಜೂ.14ರಂದು ಸಂಜೆ 4.30ರಿಂದ ರಾತ್ರಿ 9 ಗಂಟೆಯವರೆಗೆ ಜರಗಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಕೇಶವ ಹೆಗಡೆ ಮಂಗಳೂರು ತಿಳಿಸಿದ್ದಾರೆ.
ಸಭಾ ಕಾರ್ಯಕ್ರಮವನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಉದ್ಘಾಟಿಸಲಿದ್ದು, ಮಾಜಿ ಶಾಸಕ ಮೊಯ್ದೀನ್ ಬಾವಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಡಾ. ಪದ್ಮನಾಭ ಕಾಮತ್ ಮತ್ತು ಉದ್ಯಮಿ ದಿನೇಶ್ ಪೈ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಿರಿಯ ಲೆಕ್ಕಪರಿಶೋಧಕ ಸಿಎ ಎಸ್.ಎಸ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ಯಕ್ಷಗಾನದ ತೆಂಕುತಿಟ್ಟಿನ ಹಿರಿಯ ಕಲಾವಿದ ಶಿವರಾಮ ಜೋಗಿ ಬಿ.ಸಿ.ರೋಡ್ ಅವರನ್ನು ಸಮ್ಮಾನಿಸಲಾಗುವುದು. ಅನಂತರ ‘ಅಂಗದ ಸಂಧಾನ’ ಬಡಗುತಿಟ್ಟಿನ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ಕೇಶವ ಹೆಗಡೆ ಅವರು ಬುಧವಾರದಂದು ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಸುಧಾಕರ ರಾವ್ ಪೇಜಾವರ, ರವಿ ಅಲೆವೂರಾಯ, ಚರಣದಾಸ ಕುಮಾರ ಮತ್ತು ಪ್ರಶಾಂತ ಶೆಟ್ಟಿ ಉಪಸ್ಥಿತರಿದ್ದರು.