ಜೂ.23 ರಂದು ಮಂಗಳೂರಿನಲ್ಲಿ ಎಸ್‌ಐಆರ್ ಸಮಾವೇಶ

ಜೂ.23 ರಂದು ಮಂಗಳೂರಿನಲ್ಲಿ ಎಸ್‌ಐಆರ್ ಸಮಾವೇಶ


ಮಂಗಳೂರು: ದೇಶದಾದ್ಯಂತೆ ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನು ತೆಗೆದುಹಾಕುತ್ತಿದ್ದು, ಇದರ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂ.23 ರಂದು ಬೆಳಗ್ಗೆ 10.30 ರಂದು ಪುರಭವನದಲ್ಲಿ ಎಸ್‌ಐಆರ್ ಸಮಾವೇಶ ನಡೆಯಲಿದೆ ಎಂದು ಕಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದರು.

ಅವರು ಇಂದು ನಗರದ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ‘ನಮ್ಮ ನಡೆ ಜನರ ಕಡೆ’ ಎಂಬ ಘೋಷಣೆಯೊಂದಿಗೆ ಕೆಪಿಸಿಸಿ ವತಿಯಿಂದ ಈ ಸಮಾವೇಶ ಆಯೋಜನೆ ಮಾಡಿದ್ದು, ಇದಕ್ಕೆ ಮುಖ್ಯ ಅತಿಥಿಯಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಜಿ.ಸಿ. ಚಂದ್ರಶೇಕರ್. ಮಂಜುನಾಥ ಭಂಡಾರಿ ಮತ್ತಿತರ ನಾಕಕರುಗಳು ಭಾಗವಹಿಸಲಿದ್ದಾರೆ. ಇದರಲ್ಲಿ ಐದು ಜಿಲ್ಲೆಯ ಬಿಎಲ್‌ಎಗಳು ಭಾಗವಹಿಸಲಿದ್ದು, ಎಲ್ಲರಿಗೂ ಎಸ್‌ಐಆರ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದರು.

ಕರಾವಳಿ ಪ್ರವಾಸೋಧ್ಯಮದತ್ತ ಸಿಎಂ ಚಿತ್ತ:

6 ತಿಂಗಳ ಹಿಂದೆ ಮಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ ಮಾಡಿದ್ದು, ಸಿಕೆಶಿ ಅವರು ನಿನ್ನೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಕರಾವಳಿಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದ್ದಾರೆ. ಮಾತ್ರವಲ್ಲ ಮಂಗಳೂರಿನಲ್ಲಿ ಕ್ಯಾಬಿನೇಟ್ ಸಭೆ ನಡೆಸುವುದಾಗಿಯೂ ತಿಳಿಸಿದ್ದು, ಇದರಿಂದ ಅನೇಕ ಸಮಸ್ಯೆಗಳ ಬಗೆಹರಿಯಲಿವೆ ಎಂದು ಹೇಳಿದರು.

ಏಕಗವಾಕ್ಷಿ ವ್ಯವಸ್ಥೆಯನ್ನು ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಕರಾವಳಿಕ ಪ್ರಕೃತಿ ಸೌಂದರ್ಯಕ್ಕೆ ಯಾವುದೇ ಹಾನಿಯಾಗದಂತೆ, ಇಲ್ಲಿನ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೋಗುವ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ತಿಳಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸಿದರು.

ಮೈಸೂರು ದಸರಾದಲ್ಲಿ ಕಂಬಳ:

ಕಳೆದ ವರ್ಷವೇ ಮೈಸೂರು ದಸರಾದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆಯಾದ ಕಂಬಳವನ್ನು ಪ್ರಾರಂಭಿಸಬೇಕಿತ್ತು. ಅದು ಆಗಿರಲಿಲ್ಲ, ಆದರೆ ಈ ವರ್ಷದ ದಸರಾದಲ್ಲಿ ಅದನ್ನು ಪ್ರಾರಂಭಿಸುವ ಮೂಲಕ 5 ಕೋಟಿ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಶಾಸಕ ಜೆ.ಆರ್. ಲೋಬೊ, ಮುಖಂಡರುಗಳಾದ ಪದ್ಮನಾಭ ಪೂಜಾರಿ, ಜೆ. ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ವಿಕಾಸ್ ಶೆಟ್ಟಿ, ಜೋಕಿಂಮ್ ಡಿ’ಸೋಜಾ, ಇಬ್ರಾಹಿಂ ನವಾಜ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article