ಕೇಂದ್ರ ಸಹಕಾರ ಸಚಿವಾಲಯದ ಐದು ವರ್ಷ ‘ವಿಶೇಷ ಸಹಕಾರ ಸಪ್ತಾಹ’: ಜೂ.29ರಂದು ಚಾಲನೆ

ಕೇಂದ್ರ ಸಹಕಾರ ಸಚಿವಾಲಯದ ಐದು ವರ್ಷ ‘ವಿಶೇಷ ಸಹಕಾರ ಸಪ್ತಾಹ’: ಜೂ.29ರಂದು ಚಾಲನೆ

ಮಂಗಳೂರು: ರಾಷ್ಟ್ರದ ಸಹಕಾರ ಚಳುವಳಿಗೆ 122 ವರ್ಷಗಳ ಭವ್ಯ ಇತಿಹಾಸವಿದೆ. ವಿಶ್ವದಲ್ಲಿ ಅತ್ಯುತ್ತಮ ಸಹಕಾರ ಚಳುವಳಿಯನ್ನು ನಮ್ಮ ರಾಷ್ಟ್ರ ಹೊಂದಿರುತ್ತದೆ. ಸಹಕಾರ ತತ್ವದ ಮೂಲಕ ಸಮಾಜದ ಎಲ್ಲಾ ವರ್ಗದ ಆರ್ಥಿಕ ಬೆಳವಣಿಗೆಗೆ ಸಹಕಾರಿ ಕ್ಷೇತ್ರವೇ ಭದ್ರ ಬುನಾದಿಯಾಗಿದೆ. ಪ್ರಸ್ತುತ ಕೇಂದ್ರ ಸಹಕಾರ ಸಚಿವಾಲಯವು ಸ್ಥಾಪನೆಯಾಗಿ 5 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ‘ವಿಶೇಷ ಸಹಕಾರ ಸಪ್ತಾಹ’ವನ್ನು ಜೂ.29ರಿಂದ ಜು. 6ರ ತನಕ ದೇಶದಾದ್ಯಂತ ಆಚರಿಸಲು ಕೇಂದ್ರ ಸಹಕಾರ ಸಚಿವಾಲಯ ನಿರ್ಧರಿಸಿರುತ್ತದೆ. ಈ ವಿಶೇಷ ಸಹಕಾರ ಸಪ್ತಾಹವನ್ನು “ಸಹಕಾರದಿಂದ ಸಮೃದ್ಧಿ” ಎಂಬ ಧ್ಯೇಯವಾಕ್ಯದೊಂದಿಗೆ ಅರ್ಥಪೂರ್ಣವಾಗಿ ರಾಜ್ಯದೆಲ್ಲೆಡೆ ಆಚರಿಸಲಾಗುತ್ತಿದೆ. 

ಉದ್ಘಾಟನೆ..

ಜೂ.29 ರಂದು ಪೂರ್ವಾಹ್ನ 10.30 ಗಂಟೆಗೆ ನಗರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಚೇರಿ  ಸಭಾಂಗಣದಲ್ಲಿ ವಿಶೇಷ ಸಹಕಾರ ಸಪ್ತಾಹ ಚಾಲನೆ ಪಡೆಯಲಿದೆ. ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು,  ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ಮಂಗಳೂರು, ಸಹಕಾರ ಇಲಾಖೆ, ದಕ್ಷಿಣ ಕನ್ನಡ - ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸುವರು. ಉದ್ಘಾಟನೆಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ನೆರವೇರಿಸುವರು. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕ ವೇದವ್ಯಾಸ್ ಡಿ. ಕಾಮತ್ ನೆರವೇರಿಸಲಿರುವರು. 

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಎನ್. ರಮೇಶ್ ಭಾಗವಹಿಸಲಿರುವರು. 

ಈ ವಿಶೇಷ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಉಭಯ ಜಿಲ್ಲೆಗಳ ಸಹಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಮಾರಂಭವನ್ನು ಯಶಸ್ವಿಗೊಳಿಸುಂತೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article