ಜು.5 ರಂದು ದ.ಕ. ಗ್ರಂಥಾಲಯ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಜು.5 ರಂದು ದ.ಕ. ಗ್ರಂಥಾಲಯ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಮಂಗಳೂರು: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹರಾದ ಡಾ. ಎಸ್.ಆರ್. ರಂಗನಾಥನ್ ಅವರಿಂದ ಸ್ಥಾಪಿತವಾದ KALA, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ರಾಜ್ಯದಾದ್ಯಂತ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದ ಶಿಕ್ಷಣ, ಸಂಶೋಧನೆ, ಪ್ರಕಟಣೆ ಹಾಗೂ ವೃತ್ತಿಪರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ.

ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (ರಿ.), ಬೆಂಗಳೂರು ಇದರ ದಕ್ಷಿಣ ಕನ್ನಡ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 5 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಕಟ್ಟಡದಲ್ಲಿರುವ ನಾಲೆಜ್ ಸೆಂಟರ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ರೆ. ಫಾ. ಡಾ. ಮೈಕೆಲ್ ಲಿಗೋರಿ ಸಂತುಮಯೋರ್ ಉದ್ಘಾಟಿಸಲಿದ್ದಾರೆ. ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ರಾಘವೇಂದ್ರ ಕೆ.ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶೇಖರ ಎಚ್.ಪಿ. ಗೌರವ ಅತಿಥಿಯಾಗಿ ಉಪಸ್ಥಿತರಿರುವರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ. ಎಸ್.ಎಲ್. ಕಡದೇವರಮಠ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದ್ದು, ಗ್ರಂಥಾಲಯ ಕ್ಷೇತ್ರಕ್ಕೆ ನೀಡಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಪ್ರೊ. ವಿ.ಜಿ. ತಳವಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಗ್ರಂಥಪಾಲಕರು, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷೆ ಡಾ. ವಿಶಾಲ ಬಿ.ಕೆ. ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಸುಪ್ರೀತಾ ಜೆ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article