ಪರಿಸರ ಸಂರಕ್ಷಣೆಯ ಮನೋಭಾವವನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಮಹತ್ವದ ವೇದಿಕೆ: ಲೋಲಾಕ್ಷಿ ಫೆರ್ನಾಂಡಿಸ್
ಪಾದುವ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಚಟುವಟಿಕೆಗಳ ಉದ್ಘಾಟನೆ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪಾದುವ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ ನಿರ್ದೇಶಕ ರೆ. ಫಾ. ಅರುಣ್ ವಿಲ್ಸನ್ ಲೋಬೋ, ಸಮಾಜ ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಕಾಳಜಿಯನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಷನ್ ವಿನ್ಸಿ ಸಂತುಮಯೋರ್, ಮಾತನಾಡಿ, ಎನ್‌ಎಸ್‌ಎಸ್ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದ್ದು, ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿದರು.
ಸಹ ಯೋಜನಾಧಿಕಾರಿ ಅನಿಲ್ ಡಿಮೆಲ್ಲೊ, ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಹಯೋಜನಾಧಿಕಾರಿ ಲೊರೆಟ್ಟಾ ಆಂಥೋನಿ, ಎನ್‌ಎಸ್‌ಎಸ್ ಘಟಕದ ನಾಯಕ ಶ್ರವಣ್ ಕುಮಾರ್ ಹಾಗೂ ನಾಯಕಿ ಸ್ಫೂರ್ತಿ ಉಪಸ್ಥಿತರಿದ್ದರು.
ಎನ್‌ಎಸ್‌ಎಸ್ ಯೋಜನಾಧಿಕಾರಿ ಯತಿರಾಜ್ ಸ್ವಾಗತಿಸಿದರು. ಸ್ವಯಂಸೇವಕ ಆಕಾಶ್ ವಂದಿಸಿ, ಸ್ವಯಂಸೇವಕಿ ತನಿಸಾ ಕಾರ್ಯಕ್ರಮ ನಿರೂಪಿಸಿದರು.
