‘ಸ್ವಚ್ಛತಾ ಹಿ ಸೇವಾ’ ಜಾಗೃತಿ ಜಾಥಾ
Saturday, June 27, 2026
ಮಂಗಳೂರು: ಬಜಾಲ್ ನಂತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ‘ಸ್ವಚ್ಛತಾ ಹಿ ಸೇವಾ’ ಜಾಗೃತಿ ಜಾಥಾ ಶನಿವಾರ ಬಜಾಲ್ ನಂತೂರ್ ಫೈಸಲ್ ನಗರದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಬದ್ರಿ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರವೂಫ್, ಸ್ವಚ್ಛ ಪರಿಸರ ನಿರ್ಮಾಣವು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಪ್ರತಿಯೊಂದು ಮನೆಯಲ್ಲೂ ಹಸಿಕಸ ಮತ್ತು ಒಣಕಸವನ್ನು ಸಮರ್ಪಕವಾಗಿ ವಿಂಗಡಿಸಿ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವ ಮೂಲಕ ಸ್ವಚ್ಛ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ಜಾಥಾದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಕುರಿತು ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಅಶ್ರಫ್ ಕೆ.ಇ., ಜುಮಾ ಮಸೀದಿಯ ಮಾಜಿ ಅಧ್ಯಕ್ಷ ಎ.ಎನ್ ಅಬ್ಬಾಸ್, ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ನಿಕಟಪೂರ್ವ ಕಾರ್ಯದರ್ಶಿ ಅಶ್ರಫ್ ತೋಟ, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಿನಾಝ ಪರಿಸರ ಸಂರಕ್ಷಣೆಯ ಕುರಿತು ಪ್ರಾಸ್ತಾವಿಕ ಮಾತನಾಡಿದರು.



