ಹವಾನಿಯಂತ್ರಿತ ಕೋರ್ಟ್ ಸಂಕೀರ್ಣ ಉದ್ಘಾಟನೆ

ಹವಾನಿಯಂತ್ರಿತ ಕೋರ್ಟ್ ಸಂಕೀರ್ಣ ಉದ್ಘಾಟನೆ


ಮಂಗಳೂರು: ಮಂಗಳೂರಿನ ಸಂಪೂರ್ಣ ಹವಾನಿಯಂತ್ರಿತ ನ್ಯಾಯಾಲಯ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನ್ಯಾಯಾಲಯ ಸಂಕೀರ್ಣದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಮೂರನೇ ಮಹಡಿಯಲ್ಲಿ ನಡೆಯಿತು.

ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಅವರು ಹವಾನಿಯಂತ್ರಿತ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, "ದಕ್ಷಿಣ ಕನ್ನಡದಲ್ಲಿ ಬೇಸಿಗೆ ಹಾಗೂ ಮಳೆಗಾಲದಲ್ಲೂ ಎಸಿಯ ಅವಶ್ಯಕತೆ ಇದೆ. ಕೆಲಸ ಮಾಡುವ ಸ್ಥಳದಲ್ಲಿ ವಾತಾವರಣ ಉತ್ತಮವಾಗಿದ್ದರೆ, ಕೆಲಸ ಮಾಡಲು ಸಹಕಾರಿಯಾಗಲಿದೆ. ಜಿಲ್ಲೆಯ ಕೆಲವು ನ್ಯಾಯಾಲಯದಲ್ಲಿ ಈಗಾಗಲೇ ಹವಾನಿಯಂತ್ರಿತ ವ್ಯವಸ್ಥೆ ಇದೆ. ಅದರಂತೆ ಜಿಲ್ಲಾ ನ್ಯಾಯಾಲಯದಲ್ಲೂ ವ್ಯವಸ್ಥೆ ಮಾಡಲಾಗಿದೆ," ಎಂದರು.

3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಕೃಷ್ಣ ಭಟ್, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷ ಸುಜಿತ್ ಕುಮಾರ್, ಕಾರ್ಯದರ್ಶಿ ಶ್ರೀಧರ್ ಎಚ್., ಜೊತೆ ಕಾರ್ಯದರ್ಶಿ ಜ್ಯೋತಿ ಸುವರ್ಣ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಒಲ್ಮಾ ಮಾರ್ಗರೆಟ್ ಮತ್ತಿತರರು ಇದ್ದರು.

ಮಂಗಳೂರು ನ್ಯಾಯಾಲಯದ 5 ಕೋರ್ಟ್‌ಗಳಿಗೆ ಈಗಾಗಲೇ ಹವಾನಿಯಂತ್ರಿತ ವ್ಯವಸ್ಥೆ ಅಳವಡಿಸಲಾಗಿದ್ದು, 15 ಕೋರ್ಟ್‌ಗಳಿಗೆ ಮುಂದೆ ಎಸಿ ಅಳವಡಿಕೆ ಮಾಡಲಾಗುತ್ತದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article