ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆ: ಮಾದರಿ ಸೋಲಾರ್ ಗ್ರಾಮವಾಗಿ ಮೂಡಬಿದ್ರೆಯ ಪುತ್ತಿಗೆ ಗ್ರಾಮ ಆಯ್ಕೆ

ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆ: ಮಾದರಿ ಸೋಲಾರ್ ಗ್ರಾಮವಾಗಿ ಮೂಡಬಿದ್ರೆಯ ಪುತ್ತಿಗೆ ಗ್ರಾಮ ಆಯ್ಕೆ

ಮಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆಮಾಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಿಂದ ನಡೆದ ಸಭೆಯಲ್ಲಿ 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಈ ಗ್ರಾಮಗಳಲ್ಲಿ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದಲ್ಲಿ 31.12.2025 ರ ವರೆಗೆ ಅಳವಡಿಸಿದ ಸೋಲಾರ್ ಘಟಕಗಳ ಸಾಮರ್ಥ್ಯವು ಅಧಿಕವಾಗಿದ್ದು, ಈ ಗ್ರಾಮವನ್ನು 19.02.2026 ರಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾದರಿ ಸೋಲಾರ್ ಗ್ರಾಮವಾಗಿ ಆಯ್ಕೆ ಮಾಡಲಾಗಿದೆ.

ಮಾದರಿ ಸೋಲಾರ್ ಗ್ರಾಮ ಅಭಿವೃದ್ಧಿಗಾಗಿ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯು 1 ಕೋಟಿಯ ಸಹಾಯಧನವನ್ನು ಅನುಷ್ಠಾನಗೊಳಿಸುವ ಸಂಸ್ಥೆಗೆ ನೀಡುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article