ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ನಾಸೀರ್ ನೇವಕ

ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ನಾಸೀರ್ ನೇವಕ


ಮಂಗಳೂರು: ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹಿಳಾ ಘಟಕದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ಭಾನು ಅವರನ್ನು ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ ಅವರ ಶಿಫಾರಸಿನ ಮೇರೆಗೆ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ರಾಜ್ಯ ಮಹಿಳಾ ಕಾರ್ಯಕರ್ತೆಯರ ಸಭೆಯಲ್ಲಿ ರಮೀಜಾ ಭಾನು ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಕೆ. ಕೃಷ್ಣ ರೆಡ್ಡಿ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ರಾಜ್ಯ ನಾಯಕರಾದ ಕನ್ಯಾಕುಮಾರಿ, ಶ್ರೀಮಣಿ, ರಾಜೇಶ್ವರಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article