ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣ: ವಿಶೇಷ ಲೋಕ ಅದಾಲತ್
ಅವರು ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪೊಲೀಸ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಸಮನ್ಸ್, ವಾರಂಟ್ ಜಾರಿಯಾಗುತ್ತಿರುವುದರಿಂದ ಪೊಲೀಸರ ಮೇಲೂ ಒತ್ತಡ ಬೀಳುತ್ತಿವೆ. ಇಂತಹ ಪ್ರಕರಣಗಳಲ್ಲಿ ದೂರುದಾರ ಮತ್ತು ಆರೋಪಿ ರಾಜಿಯಾಗಿ ಪ್ರಕರಣ ಮುಕ್ತಾಯಗೊಳಿಸಲು ಅವಕಾಶವಿದೆ. ಇದಕ್ಕಾಗಿ ಸಾರ್ವಜನಿಕರು ಆಯಾ ತಾಲೂಕು ನ್ಯಾಯಾಲಯಗಳನ್ನು ಸಂಪರ್ಕಿಸಬಹುದಾಗಿದೆ. ಇದರಿಂದ ಪ್ರಕರಣಗಳು ತ್ವರಿತವಾಗಿ ಮುಕ್ತಾಯಗೊಂಡು ಸಾರ್ವಜನಿಕರಿಗೆ ನೆಮ್ಮದಿ ಸಿಗಲಿದೆ ಎಂದು ಅವರು ತಿಳಿಸಿದರು.
ಟ್ರಾಫಿಕ್ ದಂಡ ರಿಯಾಯಿತಿ..
ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿರುವುದರಿಂದ ಸಾರ್ವಜನಿಕರು ಇದರ ಗರಿಷ್ಠ ಪ್ರಯೋಜನ ಪಡೆದುಕೊಳ್ಳುವಂತಾಗಲು ಪೊಲೀಸ್ ಇಲಾಖೆ ಅರಿವು ಮೂಡಿಸಬೇಕು ಎಂದು ನ್ಯಾಯಾಧೀಶರು ತಿಳಿಸಿದರು.
ವಾಹನದ ವಿರುದ್ಧ 1991 ರಿಂದ 2022 ಇಸವಿಯವರೆಗೆ ದಾಖಲಾಗಿರುವ ಪ್ರಕರಣಗಳಿಗೆ ಶೇಕಡಾ 50 ರಿಯಾಯಿತಿ ಅನ್ವಯವಾಗಲಿದೆ. ಇದರಿಂದ ದಂಡ ವಸೂಲಾತಿ ಹಾಗೂ ಪ್ರಕರಣಗಳ ವಿಲೇವಾರಿಯಲ್ಲಿ ಪೊಲೀಸ್ ಹಾಗೂ ನ್ಯಾಯಾಲಯಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಮಾತನಾಡಿದರು.
ಕಾರ್ಮಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ವೀರನಗೌಡ ಪಾಟೀಲ್, ನಗರದ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್, ಎಸಿಪಿ ಗೀತಾ ಕುಲಕರ್ಣಿ, ವಿವಿಧ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.