ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
Friday, June 26, 2026
ಮಂಗಳೂರು: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಜೂ.25 ರಂದು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಬಂಧಿಸಿರುವ ಮೂಲ್ಕಿ ಪೊಲೀಸರು, ಆರೋಪಿಯಿಂದ ಎರಡು ಲಕ್ಷ ರೂ. ಮೌಲ್ಯದ ನಾಲ್ಕು ಕೆ.ಜಿ. ಗಾಂಜಾ ಮಾದಕದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಕೋಟೆಕಾರ್ ನಿವಾಸಿ ಅಬ್ಬಾಸ್ (50) ಎಂಬ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯ ವಿರುದ್ಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 45/2026 ಕಲಂ : 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಣಂಬೂರು ಂಅP ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.