ನವೋದಯ ಪ್ರೇರಕರ ತರಬೇತಿ ಕಾರ್ಯಗಾರ

ನವೋದಯ ಪ್ರೇರಕರ ತರಬೇತಿ ಕಾರ್ಯಗಾರ


ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಪ್ರವರ್ತಿತ ನವೋದಯ ಸ್ವಸಹಾಯ ಗುಂಪು ಯೋಜನೆಯ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯ ಹೊಸ ನಿಯೋಜಿತ ಪ್ರೇರಕರು ಹಾಗೂ ಮೇಲ್ವಿಚಾರಕರಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ 3 ದಿನಗಳ ತರಬೇತಿ ಕಾರ್ಯಗಾರವು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ತರಬೇತಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಗಾರದ ಉದ್ಘಾಟನೆಯನ್ನು ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಅವರು ಉದ್ಘಾಟಿಸಿ ಮಾತನಾಡಿ, ನವೋದಯ ಸ್ವಸಹಾಯ ಗುಂಪು ಜನರ ಆರ್ಥಿಕ, ಸಾಮಾಜಿಕ ಸಬಲೀಕರಣದಲ್ಲಿ ಬಹು ಮುಖ್ಯ ಪಾತ್ರ ವಹಿಸಿದೆ. ಈ ದಿಸೆಯಲ್ಲಿ ಪ್ರೇರಕರು ಈ ತರಬೇತಿಯಲ್ಲಿ ಸಕ್ರೀಯವಾಗಿ ಭಾಗವಹಿಸಿ ಗ್ರಾಮದಲ್ಲಿ ಉತ್ತಮ ಗುಂಪು ರಚನೆಗೆ ತೊಡಗಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ ಭಟ್, ಮಹಾಪ್ರಬಂಧಕ ಸುನಿಲ್ ಕುಮಾರ್ ಹೊಳ್ಳ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಸುನಿಲ್ ಕುಮಾರ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮ ಶೆಟ್ಟಿ ಉಪಸ್ಥಿತರಿದ್ದರು.

ನವೋದಯ ಸಂಸ್ಥೆಯ ಸಿಬ್ಬಂದಿ ನಮ್ರತಾ ಸ್ವಾಗತಿಸಿ, ಕಾರ್ಯಕ್ರಮದ ನಿರೂಪಿಸಿದರು. ಮಿಥುನ್ ರೈ ನೆರವೇರಿಸಿದರು.

ಈ ಕಾರ್ಯಾಗಾರದಲ್ಲಿ ತರಬೇತುದಾರರಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧಿಕಾರಿ ಪದ್ಮನಾಭ, ಹರಿನಾಥ್, ನವೋದಯ ಮೇಲ್ವಿಚಾರಕರಾದ ನಾರಾಯಣ ಎಂ.ಎಸ್. ಇವರುಗಳು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article