ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ.

ಪ್ರಸ್ತುತ ಕೊಕ್ಕಡ ಹಳ್ಳಿಂಗೇರಿಯ ನಿವಾಸಿಯಾಗಿರುವ ಮೂಲತಃ ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. 

ಕಳೆದ ಸುಮಾರು ಐದು ವರ್ಷಗಳಿಂದ ಶ್ವೇತಾ ಅವರ ತಂದೆ-ತಾಯಿ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಶ್ವೇತಾ ಎಂದಿನಂತೆ ಬೆಳಗ್ಗೆ ಎದ್ದು ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಘಟನೆಯ ವೇಳೆ ತಂದೆ ಕೆಲಸದ ನಿಮಿತ್ತ ಹೊರಗೆ ತೆರಳಿದ್ದು, ತಾಯಿ ಮಾತ್ರ ಮನೆಯಲ್ಲಿ ಇದ್ದರು. ಈ ಮಧ್ಯೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ವೇತಾಳ ಮೃತದೇಹ ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article