ನೂತನ ಸಿಎಂ ಡಿಕೆಶಿಗೆ ಜನಾರ್ದನ ಪೂಜಾರಿ ಅಭಿನಂದನೆ
Wednesday, June 3, 2026
ಮಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಸುಧೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷ ನಿಷ್ಠೆ, ತನ್ನ ಅತೀ ಕಷ್ಟದ ಸಮಯದಲ್ಲಿ ಪಕ್ಷದ ಮೇಲೆ ಇಟ್ಟ ವಿಶ್ವಾಸ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಮುಟ್ಟಿಸಿದೆ. ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಯುವ ಜನರ ಸಬಲೀಕರಣ ಹಾಗೂ ಜನ ಕಲ್ಯಾಣದ ಕಾರ್ಯಗಳಲ್ಲಿ ಮತ್ತಷ್ಟು ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದ್ದಾರೆ.