ಬಂಟ, ಬಿಲ್ಲವ ಅವಹೇಳನ: ಅನಿತಾ ಕಾಸರಗೋಡು ಬಂಧನ
Friday, June 12, 2026
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ ಹಾಗೂ ಬಿಲ್ಲವ ಸಮುದಾಯದ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಅನಿತಾ ಕಾಸರಗೋಡು ಎಂಬಾಕೆಯನ್ನು ಬರ್ಕೆ ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ಜೂ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅನಿತಾ ವಿರುದ್ಧ ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಪೂಜಾರಿ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಮಧ್ಯೆ ಅನಿತಾ ಕಾಸರಗೋಡು ಬೆಂಗಳೂರಿನಲ್ಲಿರುವ ತನ್ನ ಅಕ್ಕನ ಮನೆಯಲ್ಲಿರುವ ಬಗ್ಗೆ ಪೊಲೀಸರು ಮೊಬೈಲ್ ಟ್ರ್ಯಾಕ್ ಮೂಲಕ ಪತ್ತೆಹಚ್ಚಿ ಬಂಧಿಸಿದ್ದಾರೆ.