ಮಂಗಳೂರು: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಮೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಶುಕ್ರವಾರ ಬದ್ಧತಾ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಮೆಸ್ಕಾಂ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು. ಮೆಸ್ಕಾಂ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ ಪ್ರಮಾಣ ವಚನ ವಿಧಿ ನಿರ್ವಹಿಸಿದರು.