‘ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ’: ಯು.ಟಿ. ಖಾದರ್

‘ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ’: ಯು.ಟಿ. ಖಾದರ್


ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೂ ಒಂದಲ್ಲಾ ಒಂದು ದಿನ ಉತ್ತಮ ಅವಕಾಶ ದೊರೆಯುವುದು ಖಚಿತ. ಹೀಗಾಗಿ ಪ್ರತಿಯೊಬ್ಬರು ಪಕ್ಷದ ಹಿತಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೊದಲ ಬಾರಿ ಶುಕ್ರವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. 

ಕ್ಷೇತ್ರದ ಜನರ ಪ್ರೀತಿ, ನಾಯಕರ ಬೆಂಬಲದಿಂದ ಈ ಹಂತ ತಲುಪಲು ತಮಗೆ ಸಾಧ್ಯವಾಯಿತು. ತಾನು ಮಾಡಿರುವ ಕೆಲಸ ನೋಡಿ ಪಕ್ಷ ತಮಗೆ ಅವಕಾಶ ನೀಡಿದೆ ಎಂದು ಯು.ಟಿ.ಖಾದರ್ ಹೇಳಿದರು. 

ನಾಯಕರ ವ್ಯಕ್ತಿತ್ವಕ್ಕೆ ಹಾನಿಯಾದರೆ ಪಕ್ಷಕ್ಕೆ ಹಾನಿಯಾದಂತೆ. ಅದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು. 

ಎಸ್‌ಐಆರ್ ಬಗ್ಗೆ ಆತಂಕ ಬೇಡ: 

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಖಾದರ್ ಹೇಳಿದರು. 

ಜೂ.21ರಂದು ಹರಿಪ್ರಸಾದ್ ಅಧಿಕಾರ ಸ್ವೀಕಾರ: 

ಕಾಂಗ್ರೆಸ್ನ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಜೂ.21ರಂದು ಅಧಿಕಾರ ಸ್ವೀಕರಿಸಲಿದ್ದು. ಅವರಿಗೆ ಈ ಸ್ಥಾನ ಸಿಕ್ಕಿರು ವುದು ಇದು ದ.ಕ ಜಿಲ್ಲೆಗೆ ದೊರೆತಿರುವ ಗೌರವ. ಹೀಗಾಗಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಖಾದರ್ ಮನವಿ ಮಾಡಿದರು. 

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳಾದ ಮಮತಾ ಗಟ್ಟಿ, ಶಾಲೆಟ್ ಪಿಂಟೊ, ವಿಶ್ವಾಸ್ ಕುಮಾರ್ ದಾಸ್, ಲಾವಣ್ಯ ಬಳ್ಳಾಲ್, ಸದಾಶಿವ ಉಳ್ಳಾಲ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಭಾಸ್ಕರ್ ಕೆ, ಪಕ್ಷದ ಪ್ರಮುಖರಾದ ಶುಭೋದಯ ಆಳ್ವ, ಅಪ್ಪಿ ಮೊದಲಾದವರು ಉಪಸ್ಥಿತರಿದ್ದರು. ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article