‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ

‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ


ಮಂಗಳೂರು: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ, ದಕ್ಷಿಣ ಕನ್ನಡ ವತಿಯಿಂದ ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್’ ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಜೂ.7 ರಂದು ನಡೆಯಿತು.


ಈ ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್‌ಎಸ್‌ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್ ರನ್ನರ್ಸ್ ಹಾಗೂ ವಿ ಆರ್ ಸೈಕ್ಲಿಂಗ್ ಕ್ಲಬ್ ಸಂಸ್ಥೆಗಳ ಸಹಯೋಗದೊಂದಿಗೆ ನಡೆಯಿತು. 

ಯುವಜನರಲ್ಲಿ ಆರೋಗ್ಯಕರ ಜೀವನಶೈಲಿ, ದೈಹಿಕ ಕ್ಷಮತೆ, ಪರಿಸರ ಸಂರಕ್ಷಣೆ ಹಾಗೂ ಯುವ ಸಬಲೀಕರಣದ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

ಬೆಳಗ್ಗೆ 7 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಿಂದ ಸೈಕಲ್ ಜಾಥಾಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ’ಸೋಜಾ ಅವರು ಚಾಲನೆ ನೀಡಿ ಮಾತನಾಡಿ, ಆರೋಗ್ಯಕರ ಜೀವನಕ್ಕಾಗಿ ಸೈಕ್ಲಿಂಗ್ ಅತ್ಯಂತ ಪರಿಣಾಮಕಾರಿ ಸಾಧನವಾಗಿದ್ದು, ಪರಿಸರ ಸಂರಕ್ಷಣೆಯಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲೆಯ ಮೇರಾ ಯುವ ಭಾರತದ ಉಪನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ. ಅವರು ಯುವಜನರ ಉತ್ಸಾಹವನ್ನು ಶ್ಲಾಘಿಸಿದರು. ವಿವಿಧ ಸಂಘ-ಸಂಸ್ಥೆಗಳ ಸಹಕಾರವನ್ನು ಅಭಿನಂದಿಸಿ, ಆರೋಗ್ಯವಂತ ಹಾಗೂ ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಸೈಕ್ಲಿಂಗ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಪ್ಗರಮುಖರಾದ ಜಗದೀಶ್ ಕೆ., ಶೇಷಪ್ಪ ಅಮೀನ್, ಚಿತ್ತರಂಜನ್ ಬೋಳಾರ್, ಪರಾಂಜಲಿ ಮಾರಿಯಾ, ದಿನೇಶ್ ಅತ್ತಾವರ, ಅನಿಲ್ ಶೇಟ್, ಹರ್ನಿಶ್, ಹಾರ್ದಿಕ್ ರೈ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article