ಕರಾವಳಿಯಾದ್ಯಂತ ವರುಣನ ಸಿಂಚನ: ಮಂಗಳವಾರ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಕರಾವಳಿಯಾದ್ಯಂತ ವರುಣನ ಸಿಂಚನ: ಮಂಗಳವಾರ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಸೇರಿದಂತೆ ಕರಾವಳಿಯಾದ್ಯಂತ ಸೋಮವಾರ ಗಾಳಿ ಸಹಿತ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಕರಾವಳಿಯ ಬಹುತೇಕ ಭಾಗಗಳಲ್ಲಿ ದಿನವಿಡೀ ಮೋಡ ಹಾಗೂ ಬಿಸಿಲಿನ ಮುಚ್ಚಾಮುಚ್ಚಾಟ ಮುಂದುವರಿದಿದ್ದು, ಸಂಜೆ ವೇಳೆಗೆ ಬೆಳ್ತಂಗಡಿ, ಉಪ್ಪಿನಂಗಡಿ, ಸುಳ್ಯ ಮತ್ತು ಪುತ್ತೂರು ಸೇರಿದಂತೆ ಒಳನಾಡಿನ ಹಲವು ಕಡೆಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಭಾಗದಲ್ಲಿ ಮಂಗಳವಾರ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಮುಂಬರುವ ಮುಂದಿನ ಹಲವು ದಿನಗಳ ಕಾಲ ಕರಾವಳಿಯುದ್ದಕ್ಕೂ ಇದೇ ರೀತಿಯ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಸೋಮವಾರ ಬೆಳಗ್ಗಿನ ಹವಾಮಾನ ವರದಿಯ ಅನ್ವಯ, ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಾಸರಿ 12.1 ಮಿಲಿಮೀಟರ್ ಮಳೆ ದಾಖಲಾಗಿದೆ. ಇದೇ ಅವಧಿಯಲ್ಲಿ ಮುಲ್ಕಿ ಮತ್ತು ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಜಿಲ್ಲೆಯಲ್ಲೇ ಅತ್ಯಧಿಕ ಅಂದರೆ 39.5 ಮಿಲಿಮೀಟರ್ ಮಳೆಯಾಗಿರುವುದು ವರದಿಯಾಗಿದೆ. ಒಟ್ಟಾರೆಯಾಗಿ, ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ವಾಡಿಕೆಯ ಮಳೆಯ ನಿರೀಕ್ಷೆಯಲ್ಲಿ ಕರಾವಳಿ ಜನತೆ ಹಾಗೂ ರೈತಾಪಿ ವರ್ಗ ನಿಟ್ಟುಸಿರು ಬಿಟ್ಟಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article