ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ವೃಕ್ಷಾರೋಪಣ
ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎಸ್. ಭಟ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
ರಾಘವೇಂದ್ರ ಎಸ್. ಭಟ್ ಮಾತನಾಡಿ, ಪ್ರಕೃತಿಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗಳಿಗೆ ಉತ್ತಮ ಪರಿಸರವನ್ನು ಉಳಿಸಿಕೊಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಕಾರ್ಬನ್ ಉತ್ಸರ್ಜನೆ ಮತ್ತು ವಾಯು ಮಾಲಿನ್ಯವನ್ನು ಕಡಿಮೆಗೊಳಿಸಲು ಸಾಧ್ಯವಾದಷ್ಟು ವಾಹನ ಬಳಕೆಯನ್ನು ತಗ್ಗಿಸುವುದು, ಕಾರ್ಪೂಲಿಂಗ್ ಅಳವಡಿಸಿಕೊಳ್ಳುವುದು ಹಾಗೂ ಹಂತಹಂತವಾಗಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯತ್ತ ಸಾಗುವುದು ಅಗತ್ಯ ಎಂದ ಅವರು, ವೈಯಕ್ತಿಕ ಮತ್ತು ಸಂಸ್ಥೆಗಳು ಕೈಗೊಳ್ಳುವ ಸಣ್ಣ ಸಣ್ಣ ಪರಿಸರ ಸ್ನೇಹಿ ಕ್ರಮಗಳು ಒಟ್ಟಾಗಿ ದೊಡ್ಡ ಮಟ್ಟದ ಸಕಾರಾತ್ಮಕ ಬದಲಾವಣೆಯನ್ನು ತರಬಲ್ಲವು ಎಂದು ಅವರು ಹೇಳಿದರು
ಕರ್ಣಾಟಕ ಬ್ಯಾಂಕ್ ತನ್ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮಗಳಡಿ ಹಲವು ಪರಿಸರ ಸ್ನೇಹಿ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದ್ದು, ಪರಿಸರ ಸಂರಕ್ಷಣೆ ಮತ್ತು ಹಸಿರು ಭವಿಷ್ಯದತ್ತ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸಿದೆ. ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ಉನ್ನತ ಆಡಳಿತ ಮಂಡಳಿ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.