ಮರಣ ಹೊಂದಿದವರಿಗೆ ಗೃಹಲಕ್ಷ್ಮಿ ಮೊತ್ತ: ಹಿಂದಿರುಗಿಸಲು ಭರತ್ ಮುಂಡೋಡಿ ಸೂಚನೆ
ಅವರು ಮಂಗಳವಾರ ದ.ಕ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನು??ಟನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಮರಣ ಹೊಂದಿದ 3477 ಫಲಾನುಭವಿಗಳಿಗೆ ರೂ. 3.34 ಕೋಟಿ ಜಮೆಯಾಗಿರುವ ಬಗ್ಗೆ ಕೇಂದ್ರ ಕಚೇರಿಯಿಂದ ಮಾಹಿತಿ ಬಂದಿದೆ. ಮರಣ ಹೊಂದಿದ ಫಲಾನುಭವಿಗಳಿಗೆ ಹಣ ಜಮೆಯಾಗುವುದನ್ನು ತಡೆದರೆ ಸರ್ಕಾರದ ಹಣ ಪೋಲಾಗದಂತೆ ಮಾಡಬಹುದು ಎಂದು ಅವರು ಹೇಳಿದರು.ಮೃತಪಟ್ಟ ಫಲಾನುಭವಿಗಳನ್ನು ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಿಂದ ತೆಗೆಯಲು ಇಲಾಖಾ ವತಿಯಿಂದ ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ ಯೋಜನೆಯಡಿ ಅರ್ಕುಳದಲ್ಲಿ ಪಡಿತರ ಅಂಗಡಿ ತೆರೆಯುವ ಬಗ್ಗೆ ಸಮಸ್ಯೆ ಬಗೆಹರಿಯದೆ ಇದ್ದು, ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವಿಚಾರಿಸಿದರು. ಇಂತಹ ಸಮಸ್ಯೆಗಳ ಬಗ್ಗೆ ಆದ್ಯತೆ ಮೇರೆಗೆ ತುರ್ತಾಗಿ ಕ್ರಮವಹಿಸಬೇಕೆಂದರು.
ಪಡಿತರ ವಿತರಣೆ ಮಾಡುವಾಗ ಸರಬರಾಜುದಾರರು ಬೇಕಾಬಿಟ್ಟಿಯಾಗಿ ಅಕ್ಕಿಯನ್ನು ವಿತರಣೆ ಮಾಡದೇ ಬಹಳ ಎಚ್ಚರಿಕೆಯಿಂದ ಅಕ್ಕಿಯನ್ನು ವಿತರಣೆ ಮಾಡುವ ಬಗ್ಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಿದರು.
ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 7,734 ನೋಂದಣಿಯಾಗಿದ್ದು, 6179 ಡಿ.ಬಿ.ಟಿ ಪಾವತಿಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷ್ಮಾ ಕೆ. ಎಸ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನು??ಠನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಶೇಖರ್ ಕುಕ್ಕೇಡಿ, ಸುರೇಖಾ ಚಂದ್ರಹಾಸ್, ನಾರಾಯಣ ನಾಯಕ್, ಸದಸ್ಯರಾದ ಸುರೇಂದ್ರ ಕಂಬಳಿ, ಆಲಿಸ್ಟನ್ ಕ್ಲೈವ್ ಡಿಕುನ್ಹಾ, ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿಎ, ಶಾಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಸುಧೀರ್ ಕುಮಾರ್ ಶೆಟ್ಟಿ, ಎಸ್.ರಫೀಕ್, ಶಾಂತಲಾ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.