ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯಿಂದ ವಿಶ್ವ ಯೋಗ ದಿನಾಚರಣೆ
Sunday, June 21, 2026
ಮಂಗಳೂರು: ವಿಶ್ವ ಯೋಗ ದಿನದ ಅಂಗವಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಕದ್ರಿ ದೇವಸ್ಥಾನದಲ್ಲಿ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಯೋಗ ತರಬೇತುದಾರ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸದಸ್ಯ ಮತ್ತು ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ಕಾರ್ಯಕರ್ತ ಪ್ರಾಣಿಕ್ ಕಿನ್ನಿಗೋಳಿ ಅವರನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗೌರವಿಸಿ ಸನ್ಮಾನಿಸಿದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ ಕಾಮತ್, ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ, ಪ್ರಮುಖರಾದ ಸುರೇಖಾ ಹೆಗ್ಡೆ, ವಸಂತ್ ಜೆ. ಪೂಜಾರಿ, ಸಂಜಯ ಪ್ರಭು, ಸುಜಿತ್ ಪ್ರತಾಪ್, ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು.
