ತೋಡು ನಿರ್ಮಾಣ: ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೆಟಿ, ಪರಿಶೀಲನೆ

ತೋಡು ನಿರ್ಮಾಣ: ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೆಟಿ, ಪರಿಶೀಲನೆ


ಮಂಗಳೂರು: ಪಚ್ಚನಾಡಿ ವಾರ್ಡ್‌ನ ಮುಗ್ರೋಡಿ ಪ್ರದೇಶದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಮಳೆನೀರು ಹರಿದು ಹೋಗುವ ತೋಡು ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಕಾಮಗಾರಿ ಸ್ಥಳಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಸ್ಥಳೀಯರ ಮನವಿಯನ್ನು ಆಲಿಸಿದ ಶಾಸಕರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಮಳೆಗಾಲ ಇರುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೂ ನಿರ್ದೇಶನ ನೀಡಿದರು.


ಈ ಸಂದರ್ಭದಲ್ಲಿ ನಿಕಟ ಪೂರ್ವ ಕಾರ್ಪೋರೇಟರ್ ಸಂಗೀತಾ ಆರ್. ನಾಯಕ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಬೋಂದೆಲ್ ಹಾಗೂ ಸ್ಥಳೀಯರಾದ ರಾಮ ಮುಗ್ರೋಡಿ, ರವೀಂದ್ರ ನಾಯಕ್, ರಘು ಮೊಯಿಲಿ, ರಾಜೇಶ್, ಮಹಾನಗರ ಪಾಲಿಕೆ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article