ಜಿಲ್ಲಾ ಮಟ್ಟದ ಪೋಲಿಯೊ ಲಸಿಕೆ ಕಾರ್ಯಕ್ರಮ

ಜಿಲ್ಲಾ ಮಟ್ಟದ ಪೋಲಿಯೊ ಲಸಿಕೆ ಕಾರ್ಯಕ್ರಮ


ಮಂಗಳೂರು: ದ.ಕ. ಜಿಲ್ಲಾ ಮಟ್ಟದ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ಚಾಲನೆ ನೀಡಲಾಯಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ‘ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೊ ಲಸಿಕೆ ಕೊಡಿಸುವುದು ಹೆತ್ತವರ ಕರ್ತವ್ಯವಾಗಿದೆ. ಪ್ರತಿಯೊಂದು ಮಗುವು ದೇಶದ ಆಸ್ತಿಯಾಗಿದೆ. ಹೀಗಾಗಿ ಅವರ ಆರೋಗ್ಯದ ಕಡೆಗೆ ಗಮನ ಹರಿಸಬೇಕಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ. ರಾಜೇಶ್ ಬಿ.ವಿ., ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೇಪಾಡಿ ಮತ್ತಿತರರು ಉಪಸ್ಥಿತರಿದ್ದರು.  

1,40,677 ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಗುರಿ:

ದ.ಕ. ಜಿಲ್ಲೆಯಲ್ಲಿ 0-5 ವರ್ಷದೊಳಗಿನ 1,40,677 ಮಕ್ಕಳಿಗೆ ಪೋಲಿಯೊ ಹನಿ ಹಾಕಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಒಟ್ಟು 756 ಬೂತ್‌ಗಳನ್ನು ತೆರೆಯಲಾಗಿದೆ. ಈ ಪೈಕಿ 26 ಟ್ರಾನ್ಸಿಟ್ ತಂಡ, ಮಂಗಳೂರು ನಗರದಲ್ಲಿ ಮೂರು ಮೊಬೈಲ್ ತಂಡ ಕಾರ್ಯನಿರ್ವಹಿಸಿದೆ. 26 ಟ್ರಾನ್ಸಿಟ್ ತಂಡಗಳು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಟೀಲು ಸಹಿತ ದೇವಸ್ಥಾನಗಳಲ್ಲಿ ಪೋಲಿಯೊ ಲಸಿಕೆ ಹಾಕುವ ಕಾರ್ಯದಲ್ಲಿ ನಿರತವಾಗಿವೆ. ಜಿಲ್ಲೆಯಲ್ಲಿ 506 ಮಂದಿ ವಲಸೆ ಮಕ್ಕಳಿದ್ದು, ಅವರಿಗೂ ಪೋಲಿಯೋ ಹನಿ ಹಾಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article