ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮಹಿಳಾ ಕಾಂಗ್ರೆಸ್‌ನಿಂದ ಮನವಿ

ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮಹಿಳಾ ಕಾಂಗ್ರೆಸ್‌ನಿಂದ ಮನವಿ


ಮಂಗಳೂರು: ಕಾಟಿಪಳ್ಳ ನಿವಾಸಿ 17 ವರ್ಷದ ಗರ್ಭಿಣಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಸುರತ್ಕಲ್ ಮಹಿಳಾ ಕಾಂಗ್ರೆಸ್ ನಿಯೋಗ ಮಂಗಳವಾರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರುವಂತೆ ಯಾವುದೇ ಒತ್ತಡ, ಪ್ರಭಾವಕ್ಕೆ ಗುರಿಯಾಗದೆ ನಿಷ್ಪಕ್ಷಪಾತ, ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿ ಮನೀಶ್ ಪೂಜಾರಿಗೆ ಕಾನೂನಡಿ ಕಠಿಣ ಶಿಕ್ಷೆಯಾಗಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭ ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ ಕಾಮತ್, ಶಶಿಕಲಾ ಪದ್ಮನಾಭ, ಸಾರಿಕಾ ಪೂಜಾರಿ, ಅನಿತಾ, ಪದ್ಮ, ಅರ್ಚನಾ ಆಚಾರ್ಯ, ಜಮೀಳಾ, ಯಶೋದಾ, ಪ್ರಮೀಳಾ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article