ಖಾಯಿಲೆಗಳ ನಿಯಂತ್ರಣಕ್ಕೆ ಯೋಗ ಸಹಕಾರಿ: ಡಾ. ಜೀವರಾಜ್ ಸೊರಕೆ
Wednesday, June 24, 2026
ಮಂಗಳೂರು: ನಿರಂತರ ಯೋಗಾಭ್ಯಾಸದಿಂದ ಖಾಯಿಲೆಗಳನ್ನು ನಿಯಂತ್ರಿಸಬಹುದು ಮತ್ತು ಕೆಲಸದ ಒತ್ತಡ, ಮಾನಸಿಕ ಆರೋಗ್ಯ ಹಾಗೂ ಹಲವಾರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗಲು ನಿರಂತರ ಯೋಗ ಮಾಡುವಂತೆ ಎಸ್.ಸಿ.ಎಸ್. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಜೀವರಾಜ್ ಸೊರಕೆ ಹೇಳಿದರು.
ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ S.C.S ಆಸ್ಪತ್ರೆಯ ಸಿಬ್ಬಂದಿಗಳಿಗೆ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರಿಂದ ಯೋಗ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಶಿಷ್ಯಂದಿರಾದ ನೀನಾ ಪೈ, ಸುಶೀಲ ಕುಮಾರಿ ವಿ., ಭಾರತಿ ಎಸ್. ರಾವ್ ಮತ್ತು ಸುಮಾ ತರಬೇತಿಗೆ ಸಹಕರಿಸಿದರು.
ಆಸ್ಪತ್ರೆಯ ಸಿಬ್ಬಂದಿಗಳು ಉತ್ಸಾಹದಿಂದ ಭಾಗವಹಿಸಿದರು. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.










