ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಕುಲಶೇಖರದ ಸಿಲ್ವರ್‌ಗೇಟ್ ನಿವಾಸಿ ಜನನ್ ಜಗನ್ನಾಥ್ (29) ಹಾಗೂ ಬೋಳಾರದ ಪರೀಕ್ಷಿತ್ (33) ಬಂಧಿತ ಆರೋಪಿಗಳಾಗಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ನಗರದ ಗೂಡ್ಸ್‌ಶೆಡ್ ಬಳಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ 11.68 ಗ್ರಾಂ ತೂಕದ ಎಂಡಿಎಂಎ, 1,110 ರೂ. ನಗದು, ಮೂರು ಮೊಬೈಲ್, 1 ತೂಕಮಾಪಕ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆಯಲಾಗುವುದು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article