ಎಕ್ಸ್‌ಪರ್ಟ್ ಪಿಯು ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಎಕ್ಸ್‌ಪರ್ಟ್ ಪಿಯು ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ


ಮಂಗಳೂರು: ವಲಚ್ಚಿಲ್‌ನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ಸಾಂಸ್ಕೃತಿಕ ಕೇಂದ್ರದಲ್ಲಿ ‘ಆರೋಗ್ಯಕರ ವಯೋಸಹಜ ಬೆಳವಣಿಗೆಗಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.


ಪ್ರಖ್ಯಾತ ಯೋಗ ತರಬೇತುದಾರರಾದ ಪ್ರಾಣಿಕ್ ಅವರು ಅತ್ಯಂತ ಸುಲಭ ಹಾಗೂ ಆಕರ್ಷಕವಾಗಿ ವಿವಿಧ ಆಸನಗಳನ್ನು ಪ್ರದರ್ಶಿಸಿದರು ಮತ್ತು ವಿದ್ಯಾರ್ಥಿಗಳು ಅವರನ್ನು ಅನುಸರಿಸಿದರು.


ಈ ಸಂದರ್ಭದಲ್ಲಿ ಉಪಪ್ರಾಂಶುಪಾಲರಾದ (ಆಡಳಿತ) ಧೃತಿ ವಿ. ಹೆಗಡೆ, ಕಾರ್ಯಕ್ರಮ ನಿರ್ದೇಶಕರಾದ ಜಗದೀಶ್ ನಾಯಕ್ ಮತ್ತು ಕ್ಯಾಂಪಸ್ ರೆಸಿಡೆಂಟ್ ಮೆಂಟರ್ ಆದ ಅನಿತಾ ಪಿ. ಶೆಟ್ಟಿ ಉಪಸ್ಥಿತರಿದ್ದರು.

ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಶರಣ್ಯಾ ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article