ಪಂಪ್‌ವೆಲ್‌ನಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಕ್ರಮ: ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ

ಪಂಪ್‌ವೆಲ್‌ನಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಕ್ರಮ: ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ


ಮಂಗಳೂರು: ನಗರದ ಪಂಪ್‌ವೆಲ್‌ನಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಕಾದಿರಿಸಲಾಗಿರುವ  7 ಎಕರೆ ಜಮೀನಿನಲ್ಲಿ 2 ಎಕರೆ ಕೆ.ಎಸ್.ಆರ್.ಟಿ.ಸಿಗೆ  ಹಾಗೂ ಉಳಿದ 5 ಎಕರೆ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಮಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ  ಈ ಮಹತ್ವದ ಯೋಜನೆಗೆ ಮಹಾನಗರಪಾಲಿಕೆ ಹಾಗೂ ಕೆ.ಎಸ್.ಆರ್.ಟಿ.ಸಿ  ಅಧಿಕಾರಿಗಳು  ವಿಳಂಬವಿಲ್ಲದೆ  ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.

ಅವರು  ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ  ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ  ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಂಪನಕಟ್ಟೆ, ಸ್ಟೇಟ್‌ಬ್ಯಾಂಕ್, ಸೆಂಟ್ರಲ್ ಮಾರ್ಕೆಟ್ ಪ್ರದೇಶಗಳಲ್ಲಿ ಫುಟ್‌ಪಾತ್ ಅತಿಕ್ರಮಿಸಿ ಬೀದಿ ವ್ಯಾಪಾರ ಮಾಡುತ್ತಿರುವ ಬಗ್ಗೆ ಮಹಾನಗರಪಾಲಿಕೆಯಿಂದ ನಿರಂತರವಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ.  ಮಹಾನಗರಪಾಲಿಕೆ ಐಡಿ ಕಾರ್ಡ್ ಇರುವವರನ್ನು  ಹೊರತುಪಡಿಸಿ ಇತರರಿಗೆ ಬೀದಿ ವ್ಯಾಪಾರ ಮಾಡಲು ಅವಕಾಶವಿಲ್ಲ ಎಂದು  ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ತಿಳಿಸಿದರು.

ಮಂಗಳಾದೇವಿಯಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದಿಂದ ಆ ಭಾಗದ ಎಲ್ಲಾ ಬಸ್ಸುಗಳು ಸಂಚಾರ ಆರಂಭಿಸುವ ಬಗ್ಗೆ ಬಸ್  ಮಾಲಕರೊಂದಿಗೆ ಸಭೆ ನಡೆಸಲಾಗಿದ್ದು,  ಶೀಘ್ರದಲ್ಲಿ ಕಾರ್ಯಾಚರಣೆಗೊಳ್ಳಲಿದೆ ಎಂದು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಸಭೆಗೆ ತಿಳಿಸಿದರು.

ಜಿಲ್ಲಾ ಪೊಲೀಸ್  ಅಧೀಕ್ಷಕ ಡಾ. ಅರುಣ್ ಕೆ. ಮಾತನಾಡಿ, ನಿರಂತರ ಅಪಘಾತಗಳಿಗೆ ಕಾರಣವಾಗುತ್ತಿರುವ ಪ್ರಮುಖ ಸ್ಥಳಗಳ ಬಗ್ಗೆ  ಪೊಲೀಸ್ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆ ವರದಿ ನೀಡಲಾಗಿದ್ದು, ಕೂಡಲೇ ಇಲ್ಲಿನ ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

384 ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತು..

ಪೊಲೀಸ್ ಇಲಾಖೆ ಹಾಗೂ ಆರ್.ಟಿ.ಓ.ಯಿಂದ ತಪಾಸಣೆ ನಡೆಸಿ, 2025 ರಿಂದ 2026 ಏಪ್ರಿಲ್ 30ರವರೆಗೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಬಗ್ಗೆ 1855 ಪ್ರಕರಣಗಳು, ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳ ಸಾಗಿಸಿರುವ 99 ಪ್ರಕರಣಗಳು, ಟಿಂಟೆಡ್ ಗ್ಲಾಸ್  ಅಳವಡಿಸಿದ  12 ಪ್ರಕರಣಗಳು,  ಕರ್ಕಶ ಹಾರ್ನ್  ವಿರುದ್ಧ  201 ಕೇಸ್‌ಗಳು ಹಾಗೂ ಮಿತಿಮೀರಿದ ಭಾರ ಸಾಗಿಸಿದ  184 ಪ್ರಕರಣಗಳನ್ನು ದಾಖಲಿಸಿ ದಂಡವ ವಸೂಲಿ ಮಾಡಲಾಗಿದೆ.  ಅದೇ ರೀತಿ 2025 ರಿಂದ ಇದುವರೆಗೆ ಜಿಲ್ಲೆಯಲ್ಲಿ 433 ಮಾರಣಾಂತಿಕ  ಅಪಘಾತ  ಪ್ರಕರಣಗಳು  ವರದಿಯಾಗಿದ್ದು, ಈ ಸಂಬಂಧ  384 ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ,  ಲೋಕೋಪಯೋಗಿ ಇಲಾಖೆ ಕಾರ್ಯಕಾರಿ ಅಭಿಯಂತರ ರಾಘವೇಂದ್ರ ನಾಯ್ಕ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article