ಕೋಮು ಸೌಹಾರ್ದತೆಗೆ ಧಕ್ಕೆ: ಬಂಧನ

ಕೋಮು ಸೌಹಾರ್ದತೆಗೆ ಧಕ್ಕೆ: ಬಂಧನ


ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಬಂಧಿತನನ್ನು ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ ಎ. ಎಂದು ಗುರುತಿಸಲಾಗಿದೆ.

ಜೂ.27 ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಯ ವಿರುದ್ಧ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article