ಅಶ್ವತಪುರ ಶ್ರೀ ವಾಣಿವಿಲಾಸ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ವಾಣಿವಿಲಾಸ ಶಿಕ್ಷಣ ಪ್ರತಿಷ್ಠಾನದ ಸದಸ್ಯರಾದ ಸುಬ್ರಮಣ್ಯ ಭಟ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಪರಿಸರವನ್ನು ನಾವು ಯಾವ ರೀತಿ ಸಂರಕ್ಷಣೆ ಮಾಡಬೇಕು ಹಾಗೂ ಪರಿಸರ ಸಂರಕ್ಷಣೆಯ ಕರ್ತವ್ಯವನ್ನು ಪೋಷಕರು ಹಾಗೂ ವಿದ್ಯಾರ್ಥಿಗಳು ನಡೆಸಬೇಕಾದ ಜವಾಬ್ದಾರಿಯನ್ನು ಸಭೆಯಲ್ಲಿ ತಿಳಿಸಿದರು.
ಬೀಟ್ ಅರಣ್ಯ ಅಧಿಕಾರಿಯಾದ ಚಂದ್ರಶೇಖರ್ ಅವರು ಪರಿಸರ ಸಂರಕ್ಷಣೆಯ ಬಗ್ಗೆ, ಸಾಮಾಜಿಕ ಕಾರ್ಯಕರ್ತ ವಿನೇಶ್ ಪೂಜಾರಿ ನಿಡ್ಡೋಡಿ ಅವರು ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಗೌಡ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಕೃಷ್ಣ ವಾಣಿವಿಲಾಸ ಶಿಕ್ಷಣ ಪ್ರತಿಷ್ಠಾನದ ಸದಸ್ಯರಾದ ಸುನಿಲ್ ಕುಮಾರ್ ಸಂತೆಕಟ್ಟೆ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ವಿಟಿ ಗೀತಾ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಹಳೆ ವಿದ್ಯಾರ್ಥಿ ರಾಕೇಶ್ ಅವರು ಕಾರ್ಯಕ್ರಮ ನಿರೂಪಿಸಿದರು.
ನಂತರ ಶಾಲಾ ಮಕ್ಕಳು ಹಾಗೂ ಪೋಷಕರು ಸದಸ್ಯರೆಲ್ಲ ಸೇರಿ ಶಾಲಾ ಆಟದ ಮೈದಾನದ ಬದಿಯಲ್ಲಿ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು.
