ಮೂಡುಬಿದಿರೆಯಲ್ಲಿ ಜವನೆರ್ ಬೆದ್ರ ಫೌಂಡೇಶನ್ ನಿಂದ ಬೃಹತ್ ರಕ್ತದಾನ ಶಿಬಿರ, ಸಸಿ ವಿತರಣೆ
ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿ ಮಾತನಾಡಿ, ಮನುಷ್ಯನಿಗೆ ತುತಾ೯ಗಿ ಬೇಕಾಗುವಂತಹದ್ದು ರಕ್ತ. ಬೇರೆ ಬೇರೆ ಗುಂಪಿನ ರಕ್ತದ ಅವಶ್ಯಕತೆ ಇದ್ದವರಿಗೆ ರಕ್ತ ಸಿಗದಿದ್ದ ಸಂದಭ೯ದಲ್ಲಿ ಇಂತಹ ಶಿಬಿರಗಳಿಂದ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ವಿಥುನ್ ರೈ, ಮಾಜಿ ಸಚಿವ ಹಾಗೂ ಸಮಾಜ ಮಂದಿರ ಸಭಾ ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ಬಿಜೆಪಿ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಸುದರ್ಶನ್ ಎಂ, ವಕೀಲರ ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ಇನ್ನರ್ ವೀಲ್ ಕ್ಲಬ್ ನಿಕಟಪೂರ್ವ ಅಧ್ಯಕ್ಷೆ ಶ್ವೇತಾ ಜೈನ್, ಮೂಡುಬಿದಿರೆ ಪುರಸಭೆ ನಿಕಟಪೂರ್ವ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಸಮಾಜ ಮಂದಿರ ಸಭಾ ಕಾರ್ಯದರ್ಶಿ ಸುರೇಶ್ ಪ್ರಭು, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಅಧ್ಯಕ್ಷ ಹರೀಶ್ ಎಂ.ಕೆ, ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಭಾಗವಹಿಸಿ ಜವನೆರ್ ಬೆದ್ರ ಫೌಂಡೇಶನ್‌ನ ಸಮಾಜಮುಖಿ ಸೇವಾ ಕಾರ್ಯವನ್ನು ಶ್ಲಾಘಿಸಿದರು.
ಸಂದೀಪ್ ಕೆಲ್ಲಪುತ್ತಿಗೆ ಕಾರ್ಯಕ್ರಮ ನಿರೂಪಿಸಿದರು. ಅಕ್ಷಯ್ ಕುಮಾರ್ ವಂದಿಸಿದರು.
ರಕ್ತದಾನ ಶಿಬಿರದಲ್ಲಿ 118 ಮಂದಿ ರಕ್ತದಾನ ಮಾಡಿದರು.

