ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ
ಸಂಸ್ಥೆಯ ಕಾನೂನು ಸಲಹೆಗಾರ ಲಕ್ಷ್ಮೀಶ್ ರೈ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಹಾಗೂ ಪೋಕ್ಸೋ ಕಾಯ್ದೆಗಳ ಕುರಿತು ಮಾಹಿತಿ ನೀಡಲಾಯಿತು.
ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಮೂಡಿಸಲಾಗಿದ್ದು, ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜನ್ನು ‘ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ’ ಎಂದು ಘೋಷಿಸಲಾಯಿತು.
ಅಧ್ಯಕ್ಷತೆಯನ್ನು ಸಂಸ್ಥೆಯ ಟ್ರಸ್ಟಿ ಹಾಗೂ ಪ್ರಾಂಶುಪಾಲ ಡಾ. ಎಸ್. ಎನ್. ವೆಂಕಟೇಶ್ ನಾಯಕ್ ವಹಿಸಿದ್ದರು.
ಸಂಸ್ಥೆಯ ಆಡಳಿತಾಧಿಕಾರಿ ಅರುಣ್ ಡಿಸಿಲ್ವಾ, ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಮಹತ್ವ ಹಾಗೂ ಶಿಸ್ತು ಪಾಲನೆಯ ಅಗತ್ಯದ ಬಗ್ಗೆ ತಿಳಿಸಿದರು. ಕಾಲೇಜಿನ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿ ವಿಕಾಸ್ ಹೆಬ್ಬಾರ್, ಮಕ್ಕಳ ರಕ್ಷಣಾ ನೀತಿ, ಸುರಕ್ಷತಾ ವ್ಯವಸ್ಥೆಗಳು ಹಾಗೂ ಸಲಹಾ ಪೆಟ್ಟಿಗೆಯ ಸದುಪಯೋಗದ ಕುರಿತು ಮಾಹಿತಿ ನೀಡಿದರು.
ಟ್ರಸ್ಟಿಗಳಾದ ಡಾ. ಶರತ್ ಗೋರೆ, ಯೋಗೇಶ್ ಬೆಡೇಕರ್, ಚಂದ್ರಶೇಖರ ರಾಜೇ ಅರಸ್, ಮೆಹಬೂಬ್ ಬಾಷಾ ಹಾಗೂ ಸುಭಾಷ್ ಝಾ ಉಪಸ್ಥಿತರಿದ್ದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಹರೀಶ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು. ವರ್ಷಾ ಕಾಮತ್ ಸ್ವಾಗತಿಸಿದರು. ಸತೀಶ್ ಬಂಗೇರ ವಂದಿಸಿದರು.