ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಕಲ್ಲಬೆಟ್ಟು ಶ್ರೀ ಗಣೇಶ ಸೇವಾ ಟ್ರಸ್ಟ್‌ನ ನೂತನ ಕಟ್ಟಡದ ನೀಲನಕಾಶೆ, ವಿಜ್ಞಾಪನಾ ಪತ್ರ ಬಿಡುಗಡೆ
ಟ್ರಸ್ಟ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅಧ್ಯಕ್ಷತೆವಹಿಸಿ, ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ನೂತನ ಕಟ್ಟಡದ ನೀಲನಕ್ಷೆಯ ವಿವರಗಳನ್ನು ನೀಡಿದ ಅವರು, ಟ್ರಸ್ಟ್‌ನ ಎಲ್ಲರ ಸಹಕಾರ, ಸಾರ್ವಜನಿಕ ಗಣೇಶೋತ್ಸವ ಸಮಿತಿಯು 24 ವರ್ಷಗಳನ್ನು ಪೂರ್ಣಗೊಳಿಸಿ ಬೆಳ್ಳಿ ಹಬ್ಬದ ಆಚರಣೆಯತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಮನವಿ ಮಾಡಿದರು.ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಶ್ರೀಪತಿ ಭಟ್ ಕಳೆದ 24 ವರ್ಷಗಳಿಂದ ಸೇವೆ ಸಲ್ಲಿಸಿದ ಕಾರ್ಯಕರ್ತರ ಕೊಡುಗೆಯನ್ನು ಸ್ಮರಿಸಿದರು.
ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ಶಿಕಾರಿಪುರ ಈಶ್ವರ ಭಟ್, ಟ್ರಸ್ಟ್‌ನ ಉದ್ದೇಶಗಳು ಮತ್ತು ಜನಪರ ಕಾಳಜಿಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವಂತೆ ಕರೆ ನೀಡಿದರು.
ಪದ್ಮಯ್ಯ ಸುವರ್ಣ, ಕೇಶವ ಹಗ್ಡೆ, ರಮೇಶ್‌ಚಂದ್ರ ಪಿ., ಸುಧೀರ್ ಪೈ, ಕರುಣಾಕರ್ ಶೆಟ್ಟಿ, ಯೋಗಿಶ್ ಪೈ, ಕೃಷ್ಣಪ್ಪ, ರಂಜಿತ್ ಪಿ., ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಶೆಟ್ಟಿ, ಕಾರ್ಯದರ್ಶಿ ವಿಶಾಲ್ ಮಾರೂರು, ಸ್ವರ್ಣಗೌರಿ ಮಾತೃ ಮಂಡಳಿಯ ಅಧ್ಯಕ್ಷೆ ಪ್ರಿಯಾಂಕ ಬರ್ಮನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕೋಶಾಧಿಕಾರಿ ರೋಹನ್ ಬಂಗೇರ ಸ್ವಾಗತಿಸಿದರು. ವಿಜೇಶ್ ವಂದಿಸಿದರು. ಜಿ.ಕೆ. ಭಟ್ ಕಾರ್ಯಕ್ರಮ ನಿರೂಪಿಸಿದರು.