ನೂತನ ನ್ಯಾಯಾಧೀಶರಿಂದ ನ್ಯಾಯಾಲಯದಲ್ಲಿ ಪರಿಸರ ದಿನಾಚರಣೆ
Friday, June 5, 2026
ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಮೂಡುಬಿದಿರೆ ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ಮೂಡುಬಿದಿರೆ ನ್ಯಾಯಾಲಯದ ಜಂಟಿ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಕೃಷ್ಣರಾಜ್ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಅಧಿಕಾರಿ ಶ್ರೀಧರ್, ವಲಯಾರಣ್ಯಾಧಿಕಾರಿ ಕಿರಣ್ ಕುಮಾರ್ ಜಿ., ವಕೀಲರ ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ, ಸ್ಥಾಪಕ ಅಧ್ಯಕ್ಷ ಬಾಹುಬಲಿ ಪ್ರಸಾದ್, ಹಿರಿಯ ವಕೀಲ ಕೆ.ಆರ್ ಪಂಡಿತ್, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಭಂಡಾರಿ ಹಾಗೂ ಪ್ರವೀಣ್ ಲೋಬೊ, ಮತ್ತಿತರರು ಈ ಸಂದಭ೯ದಲ್ಲಿದ್ದರು.
