ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಅಂಜಿಯೋಪ್ಲಾಸ್ಟಿ ಉಚಿತ ಚಿಕಿತ್ಸೆ ಆರಂಭ

ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಅಂಜಿಯೋಪ್ಲಾಸ್ಟಿ ಉಚಿತ ಚಿಕಿತ್ಸೆ ಆರಂಭ


ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯ ಇರುವುದಾಗಿ ಸಂಸ್ಥೆಯ ಪ್ರವರ್ತಕ ಡಾ. ಎಂ. ಮೋಹನ್ ಆಳ್ವ ತಿಳಿಸಿದರು. 


ಅವರು ಗುರುವಾರ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಮುಂತಾದ ಲಕ್ಷಣಗಳನ್ನು ಹೊಂದಿರುವವರು ತಕ್ಷಣ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ತಜ್ಞ ವೈದ್ಯರ ಸಲಹೆಯ ಮೇರೆಗೆ ಅಗತ್ಯವಿರುವ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಸೌಲಭ್ಯ, ಶಾಶ್ವತ ಪೇಸ್ಮೆಂಟ್, ಹೃದಯರಂದ್ರ ಚಿಕಿತ್ಸೆ ಅನುಭವಸಂಪನ್ನ ಹೃದಯ ತಜ್ಞರು ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆಗಳೊಂದಿಗೆ ನೀಡಲಾಗುತ್ತದೆ. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರು ಈ ಸೌಲಭ್ಯದ ಪ್ರಯೋಜನ ಪಡೆಯಬಹುದು.

ಆಯುಷ್ಮಾನ್ ಕಾರ್ಡ್ ಹೊಂದಿರುವ ಅರ್ಹ ರೋಗಿಗಳು ಅಗತ್ಯ ದಾಖಲೆಗಳೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಸೌಲಭ್ಯ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880807509 ಯನ್ನು ಸಂಪರ್ಕಿಸಲು ಕೋರಲಾಗಿದೆ.

ಕಾರ್ಡಿಯಾಲಜಿಸ್ಟ್ ಮುಖ್ಯ ವೈದ್ಯ ಡಾ. ದಿತೇಶ್, ಫಿಸಿಸಿಯನ್ ಡಾ. ಹರೀಶ್ ನಾಯಕ್, ಡಾ. ಶಮಂತ್ ಶೆಟ್ಟಿ, ಡಾ. ವಿನಯಚಂದ್ರ ಪತ್ರಿಕಾಗೋಷ್ಠಿಯಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article