ನೆಲ್ಲಿಕಾರು ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನ ಆಚರಣೆ
Friday, June 5, 2026
ಮೂಡುಬಿದಿರೆ: ನೆಲ್ಲಿಕಾರು ಗ್ರಾಮ ಪಂಚಾಯತ್ ನ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು.
ಮೂಡುಬಿದಿರೆ ಅರಣ್ಯ ಇಲಾಖೆಯ ಉಪವಲಯ ಅರಣ್ಯಧಿಕಾರಿ ಬಸಪ್ಪ ಸರ್ ಅವರು ಪರಿಸರ ದಿನಾಚರಣೆಯ ಹಾಗೂ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿ, ಎಲ್ಲರೂ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ನೀಡುವ ಕೆಲಸ ಮಾಡಬೇಕಾಗಿದೆ ಆಗಬೇಕಾಗಿದೆ ಎಂದರು. ಪಂಚಾಯತ್ ಕಾರ್ಯದರ್ಶಿ ದಾಮೋದರ , ಅರಣ್ಯ ಪಾಲಕ ಧರ್ಮರಾಜ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಬ್ರಾಮರಿ ಸಂಜೀವಿನಿ ಒಕ್ಕೂಟದ ಲತಾ, ಯಶಶ್ವಿನಿ, ವಿಜಯ, ರಾಜಶ್ರೀ, ಮತ್ತು ಗ್ರಾಮಸ್ಥರು ಹಾಜರಿದ್ದರು.
ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಕುಮಾರ್ ಜೈನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
