ಮದ್ರಾಸ್, ವಾರಣಾಸಿಯ ಐಐಟಿಗೆ ವೈಬ್ರೆಂಟ್ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರವೇಶ

ಮದ್ರಾಸ್, ವಾರಣಾಸಿಯ ಐಐಟಿಗೆ ವೈಬ್ರೆಂಟ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಪ್ರವೇಶ


ಮೂಡುಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಇಬ್ಬರು  ವಿದ್ಯಾರ್ಥಿಗಳು ಮದ್ರಾಸ್, ವಾರಣಾಸಿಯ ಐಐಟಿಗೆ ಪ್ರವೇಶ ಪಡೆದಿದ್ದಾರೆ.

ವಿದ್ಯಾರ್ಥಿ ಧನುಷ್ ಗುತ್ತಿ ಅಖಿಲ ಭಾರತ ಮಟ್ಟದಲ್ಲಿ 95ನೇ ರ‍್ಯಾಂಕ್ ಪಡೆದು ಐಐಟಿ ಮದ್ರಾಸ್‌ನ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗಕ್ಕೆ ಪ್ರವೇಶ ಪಡೆದಿದ್ದಾರೆ. ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 598 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದರು.

ಇನ್ನೋರ್ವ ವಿದ್ಯಾರ್ಥಿ ಆದಿತ್ಯ ಅನಿಲ್ ಕೆಂಚಣ್ಣಾವರ್ 1803ನೇ ರ‍್ಯಾಂಕ್ ಗಳಿಸಿ ಐಐಟಿ (ಬಿಎಚ್‌ಯು) ವಾರಾಣಸಿಯ ಮ್ಯಾಥಮ್ಯಾಟಿಕ್ಸ್ ಅಂಡ್ ಕಂಪ್ಯೂಟಿಂಗ್ ವಿಭಾಗಕ್ಕೆ ಪ್ರವೇಶ ಪಡೆದಿದ್ದಾರೆ. ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್-2026 ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article