ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ 2025-26ರ ಸಾಲಿನ ದ್ವಿತೀಯ ಪಿಯುಸಿ ರ‍್ಯಾಂಕ್ ವಿಜೇತರಿಗೆ ಸನ್ಮಾನ

ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ 2025-26ರ ಸಾಲಿನ ದ್ವಿತೀಯ ಪಿಯುಸಿ ರ‍್ಯಾಂಕ್ ವಿಜೇತರಿಗೆ ಸನ್ಮಾನ


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ 2025-26ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರ‍್ಯಾಂಕ್ ಹಾಗೂ ಉನ್ನತ ಶ್ರೇಣಿಯನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಜೂನ್ 1 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಬ್ದುಲ್ ಸಮದ್ ಎಂ. ಅವರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ನಿಮ್ಮ ಸಾಧನೆಯ ಹಿಂದೆ ನಿಮಗೆ ಸಹಾಯಕರಾಗಿ ನಿಂತ, ಹೆತ್ತವರು, ಅಧ್ಯಾಪಕರು ಮತ್ತು ಸಂಸ್ಥೆಗೆ ಚಿರ ಋಣಿಗಳಾಗಿರಬೇಕು. ಜೀವನದಲ್ಲಿ ಪ್ರತಿಯೊಬ್ಬರಿಗೂ ಅವಕಾಶಗಳು ಲಭ್ಯವಿದ್ದು, ಅವಕಾಶಗಳನ್ನು ಬಳಸಿಕೊಂಡು ಉತ್ತಮ ಸಾಧನೆ ಗೈಯುವತ್ತ ಗಮನಹರಿಸಬೇಕು ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಶೈಕ್ಷಣಿಕ ಸಾಧನೆಯ ಜೊತೆಗೆ, ಸಾಂಸ್ಕೃತಿಕ ಮತ್ತು ಇತರ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಯಶಸ್ಸು ಸತತ ಪರಿಶ್ರಮದಿಂದಷ್ಟೇ ಸಾಧ್ಯವಾಗಿದ್ದು, ಉತ್ತಮ ಚಾರಿತ್ರ್ಯ ಮತ್ತು ಮೌಲ್ಯಾಧಾರಿತ ನಡತೆಗಳು ನಿಮ್ಮ ಸಾಧನೆಗೆ ಪೂರಕ ಎಂದು ತಿಳಿಸಿದರು.

ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯಾ ಅನಿಲ್ ರೈ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅಪೂರ್ವ 595 ಅಂಕಗಳನ್ನು ಪಡೆದು ರಾಜ್ಯದಲ್ಲಿ 4ನೇ ರ‍್ಯಾಂಕ್ ಮತ್ತು ವಾಣಿಜ್ಯ ವಿಭಾಗದಲ್ಲಿ ಸಪೀದಾ 595 ಅಂಕಗಳನ್ನು ಪಡೆದು ರಾಜ್ಯದಲ್ಲಿ 6ನೇ ರ‍್ಯಾಂಕ್, ಸೋನಿಕಾ ಕುಟಿನ್ನಾ 592 ಅಂಕಗಳನ್ನು ಪಡೆದು ರಾಜ್ಯದಲ್ಲಿ 9ನೇ ರ‍್ಯಾಂಕ್, ದೀಪ್ತಿ ಕೆ.ಎಸ್. 591 ಅಂಕಗಳನ್ನು ಪಡೆದು ರಾಜ್ಯದಲ್ಲಿ 10ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶೇಕಡ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಈ ಬಾರಿ ಕಾಲೇಜಿನ 42 ಮಂದಿ ವಿದ್ಯಾರ್ಥಿಗಳು ಹಾಗೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 214 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಪಿ.ಆರ್. ಸ್ವಾಗತಿಸಿದರು. ಪೂರ್ಣಿಮಾ ಡಿ.ಎಸ್. ವಂದಿಸಿ, ವೀಕ್ಷಾ ರೈ ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article